ಮುರುಘಾ ಶರಣರನ್ನು 3 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಇದಕ್ಕೂ ಮುನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.
ತನಿಖೆಗಾಗಿ ಸ್ವಾಮೀಜಿ ಅವರನ್ನು ಐದು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಸದ್ಯ 3 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಆದೇಶಿಸಿದ ನ್ಯಾಯಾಧೀಶರು , ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ ಹಾಜರು ಮಾಡುವಂತೆ ಸೂಚಿಸಿದ್ದಾರೆ. ಅದರಂತೆ ಅಂದು ಬೆಳಗ್ಗೆ 11 ಗಂಟೆಗೆ ಪೊಲೀಸರು ಶ್ರೀಗಳನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ... ಮುರುಘಾಶ್ರೀ ಬಂಧನ ವಿಚಾರ: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ