×
Ad

ಸೆ. 5ರಂದು ರಾಜ್ಯಮಟ್ಟದ ಆನ್‍ಲೈನ್ ಶಿಕ್ಷಕರ ದಿನಾಚರಣೆ: ಐಟಾ

Update: 2022-09-02 17:36 IST

ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಐಟಾ) ಕರ್ನಾಟದ ವತಿಯಿಂದ ಸೆ.5 ರಂದು ರಾತ್ರಿ 9ಗಂಟೆಗೆ ರಾಜ್ಯಮಟ್ಟದ “ಆನ್‍ಲೈನ್ ಶಿಕ್ಷಕರ ದಿನಾಚರಣೆ-2022” ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ತಿಳಿಸಿದ್ದಾರೆ.

ಮಾಜಿ ಸಚಿವ ಹಾಗೂ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸೆಂಟ್ರಲ್ ಎಜ್ಯುಕೇಶನ್ ಬೋರ್ಡ್ ನಿರ್ದೇಶಕ ಶಿಕ್ಷಣ ತಜ್ಞ ಸೈಯ್ಯದ್ ತನ್ವೀರ್ ಅಹ್ಮದ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ರಹೀಮ್ ಶೇಖ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮವು ಝೋಮ್ ಮೂಲಕ ನಡೆಲಿದ್ದು YouTube.com/aiitakarnataka YouTube channel  ನಲ್ಲಿ ನೇರ ಪ್ರಸಾರಗೊಳ್ಳಲಿದೆ. ರಾಜ್ಯದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಯೂಟ್ಯೂಬ್ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News