×
Ad

ಬಂಟ್ವಾಳ; ಕಾರು ಢಿಕ್ಕಿ: ಎಲ್.ಕೆ.ಜಿ. ವಿದ್ಯಾರ್ಥಿ ಮೃತ್ಯು

Update: 2022-09-02 19:50 IST
ಆದಿಲ್

ಬಂಟ್ವಾಳ, ಸೆ. 2: ಕಾರು ಢಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಇಲ್ಲಿನ ಖಲಂದರ್ ಅಲಿ ಸಖಾಫಿ ಎಂಬವರ ಪುತ್ರ ಆದಿಲ್ (4) ಮೃತಪಟ್ಟ ಬಾಲಕ. ಆದಿಲ್ ದಾರುಲ್ ಅಶ್ ಅರಿಯ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಯಲ್ಲಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News