×
Ad

ಮಂಗಳೂರು : ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಪ್ರಧಾನಿ ಮೋದಿ ಮಾತುಕತೆ

Update: 2022-09-02 19:56 IST

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶ ಮುಗಿದ ಬಳಿಕ  ಹೆಲಿಪ್ಯಾಡ್ ಬಳಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಜತೆ ಅನೌಪಚಾರಿಕ ಮಾತುಕತೆ ನಡೆಸಿದರು. ಕಮಿಟಿ ಸದಸ್ಯರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿ ಅವರಿಗೆ ಪರಿಚಯಿಸಿದರು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನದ ಮೋದಿ ಅವರು ವಿವರ ಪಡೆದರು. ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಸರ್ಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕೆಂದು ಮೋದಿ ಅವರು ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಡಿ.ವಿ.ಸದಾನಂದ ಗೌಡ, ಅರುಣ್ ಸಿಂಗ್, ಸಿ.ಟಿ.ರವಿ. ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಡಾ.ಅಶ್ವಥ್ ನಾರಾಯಣ್, ರಾಜೇಶ್ ಜಿ.ವಿ, ಡಿ.ಕೆ.ಅರುಣಾ, ನಿರ್ಮಲ್ ಕುಮಾರ್ ಸುರಾನಾ, ಆರ್.ಅಶೋಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News