ಉಡುಪಿ: ಗಾಂಜಾ ಸೇವನೆ ಪ್ರಕರಣ: ಮೂವರು ವಶಕ್ಕೆ
Update: 2022-09-02 21:01 IST
ಉಡುಪಿ, ಸೆ.2: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆ.30ರಂದು ಉಡುಪಿ ನಗರ ಠಾಣಾ ವ್ಯಾಪ್ತಿಯ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ ಸ್ಥಳದಲ್ಲಿ ಆಶೀಕ್(22) ಹಾಗೂ ಅತೀಶ್ (25) ಮತ್ತು ಆ. 29ರಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಬಂಗ್ಲೆಗುಡ್ಡೆ ಮೈದಾನದ ಬಳಿ ಇಸ್ರಾರ್ ತಜ್ಮಲ್ ಹುಸೇನ್ ಶೇಕ್(32) ಎಂಬವರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.
ಇವರನ್ನು ಮಣಿಪಾಲ ಕೆಎಂಸಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಇವರೆಲ್ಲ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.