×
Ad

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Update: 2022-09-02 21:03 IST

ಉಡುಪಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ, ಬ್ಯಾಟರಿ ಚಾಲಿತ/ಇತರೆ ದ್ವಿಚಕ್ರ ವಾಹನ ಯೋಜನೆ, ಪೌರ ಕಾರ್ಮಿಕ/ ಸಫಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣಾ ಯೋಜನೆ ಹಾಗೂ ಭೂಒಡೆತನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಫಾಯಿಕರ್ಮಚಾರಿ/ಮ್ಯಾನುವಲ್ ಸ್ಕಾವೆಂಜರ್ಸ್‌ ಹಾಗೂ ಅವರ ಅವಲಂಬಿತ ರಿಂದ -https://sevasindhu.karnataka.gov.in- ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ ೨೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ  ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News