×
Ad

ಸೆ.5ರಿಂದ ಫಿಬಾ ಯು-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‍ಗೆ ಸಿದ್ಧತೆ: ಸಚಿವ ನಾರಾಯಣಗೌಡ

Update: 2022-09-02 21:09 IST

ಬೆಂಗಳೂರು, ಸೆ. 2: ಇದೆ ತಿಂಗಳ 5ರಿಂದ ಫಿಬಾ ಅಂಡರ್-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್‍ಬಾಲ್ ಚಾಂಪಿಯನ್ ಶಿಪ್‍ಗೆ ಎಲ್ಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣ ಗೌಡ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. ಭಾರತ, ಜಪಾನ್, ಚೀನಾ, ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡಗಳು ಭಾಗಿಯಾಗಲಿವೆ. ಈ ಕ್ರೀಡಾಕೂಟದಲ್ಲಿ ವಿಜೇತ ಮೊದಲ 4 ತಂಡಗಳು 2023ರ ಜುಲೈನಲ್ಲಿ ಸ್ಪೈನ್‍ನಲ್ಲಿ ನಡೆಯಲಿರುವ ಅಂಡರ್-19 ಮಹಿಳೆಯರ ಫಿಬಾ ವಿಶ್ವ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಹೇಳಿದರು. 

ಈ ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 1.60 ಕೋಟಿ ರೂ.ಅನುದಾನ ನೀಡಿದೆ. 77 ಲಕ್ಷ ರೂ.ವೆಚ್ಚದಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ 8.96 ಕೋಟಿ ರೂ.ವೆಚ್ಚದಲ್ಲಿ ಕೋರಮಂಗಲ ಒಳಾಂಗಣ ಕ್ರೀಡಾಂಗಣ ನವೀಕರಣಗೊಳಿಸಿ ಟೂರ್ನಿಗೆ ಸಜ್ಜುಗೊಳಿಸಲಾಗಿದೆ ಎಂದು ನಾರಾಯಣಗೌಡ ತಿಳಿಸಿದರು. 

ಇದೇ ವೇಳೆ ಫಿಬಾ ಅಂಡರ್ 18 ಮಹಿಳೆಯರ ಬ್ಯಾಸ್ಕೆಟ್ ಬಾಲ್ ಭಾರತ ತಂಡದ ಆಟಗಾರರಿಗೆ ಕಿಟ್‍ಗಳನ್ನು ನೀಡಿ ಶುಭ ಹಾರೈಸಿದರು. ಇಂಡಿಯನ್ ಬ್ಯಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News