×
Ad

ಬಿಬಿಎಂಪಿ ಚುನಾವಣೆ | ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಗಡುವು ವಿಸ್ತರಣೆ

Update: 2022-09-02 23:04 IST

ಬೆಂಗಳೂರು, ಸೆ.2: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಮತದಾರರ ಪಟ್ಟಿ ಕುರಿತಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸಿ ರಾಜ್ಯ ಚುನಾವಣಾ ಆಯೋಗದ ಸುತ್ತೋಲೆ ಹೊರಡಿಸಿದೆ. ಈ ಹಿಂದೆ ಸೆ.2 ಕೊನೆಯ ದಿನ ಎಂದು ತಿಳಿಸಿತ್ತು.

ಮತದಾರರು ಕರಡು ಮತದಾರರ ಪಟ್ಟಿಯನ್ನು ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ವೀಕ್ಷಿಸಿ, ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸೆ.22ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News