×
Ad

ಉತ್ತರಪ್ರದೇಶ: ನಿಂತಿದ್ದ ಬಸ್‌ಗೆ ಟ್ರಕ್ ಢಿಕ್ಕಿ, ನಾಲ್ವರು ಮೃತ್ಯು, 24 ಮಂದಿಗೆ ಗಾಯ

Update: 2022-09-03 10:14 IST
Photo:PTI

ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ ವಲಸೆ ಕಾರ್ಮಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ( truck hit a bus carrying migrant workers)ನಾಲ್ವರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿದ್ದಾರೆ.

ಬಾರಾಬಂಕಿಯ ಮಹುಂಗುಪುರ ಬಳಿ ಟ್ರಕ್‌ಗೆ ಡಬಲ್ ಡೆಕ್ಕರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ನೇಪಾಳಿ ವಲಸೆ ಕಾರ್ಮಿಕರನ್ನು ಹೊತ್ತುಸಾಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ನಂತರ ಬಸ್ ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ಸಮಯದಲ್ಲಿ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಬಸ್ ನಲ್ಲಿದ್ದ ಸುಮಾರು 60 ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ  24 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಾರಾಬಂಕಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆರು ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಿದ್ದಾರೆ ಎಂದು ಬರಾಬನಿ ಹಿರಿಯ ಪೊಲೀಸ್ ಅಧಿಕಾರಿ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ.

ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರನ್ನು ನೇಪಾಳಕ್ಕೆ ವಾಪಸ್ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News