×
Ad

ಅರವಿಂದ ಲಿಂಬಾವಳಿಯ ವರ್ತನೆ ಬಿಜೆಪಿಯ ಜನವಿರೋಧಿ ಧೋರಣೆ: ಕಾಂಗ್ರೆಸ್ ಆಕ್ರೋಶ

Update: 2022-09-03 13:17 IST

ಬೆಂಗಳೂರು: ಅಹವಾಲು ಹೇಳಿ ಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಶಾಸಕ ಅರವಿಂದ ಲಿಂಬಾವಳಿ ನಿಂದಿಸಿದ ವಿಡಿಯೊ ಒಂದು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ'  ಎಂದು ಹೇಳಿದೆ. 

 'ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ?' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

ಇದನ್ನೂ ಓದಿ: ಅಹವಾಲು ಹೇಳಿ ಕೊಳ್ಳಲು ಬಂದ ಮಹಿಳೆಗೆ ನಿಂದನೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಆಕ್ರೋಶ 


 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News