×
Ad

ರಾಜ್ಯ ಮಟ್ಟದ ವಿಜ್ಞಾನ ಸಂಬಂಧಿತ ಸ್ಪರ್ಧೆ

Update: 2022-09-03 20:35 IST
ಸಾಂದರ್ಭಿಕ ಚಿತ್ರ

ಉಡುಪಿ, ಸೆ.3: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ಉಪಗ್ರಹಗಳನ್ನು ಉಡಾವಣೆ ಮಾಡುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮೂಲಕ ಇಸ್ರೋ, ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್, ಕೆಎಸ್‌ಸಿಎಸ್‌ಟಿ ಹಾಗೂ ಕೆಎಸ್‌ಟಿಇಪಿಎಸ್ ಸಹಯೋಗ ದಲ್ಲಿ ಅನುಷ್ಠಾನ ಮಾಡಲಾಗಿರುವ ಪುನೀತ್ ನ್ಯಾನೋ ಉಪಗ್ರಹ ಯೋಜನೆಯಡಿ ಜಿಲ್ಲೆಯ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿದ್ಯಾರ್ಥಿ ಗಳು ಭಾಗವಹಿಸುವ ಸಲುವಾಗಿ ರಾಜ್ಯ ಮಟ್ಟದ ವಿಜ್ಞಾನ ಸಂಬಂಧಿತ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಉಪಗ್ರಹ ಉಡಾವಣೆಯ ವೀಕ್ಷಣೆಗೆ ಶ್ರೀಹರಿಕೋಟಾಕ್ಕೆ ತೆರಳಲು ಅವಕಾಶ ಕಲ್ಪಿಸಲಾಗುವುದು. 

ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಚಿತ್ರ ಬಿಡಿಸುವ ಸ್ಪರ್ಧೆಗಳಿದ್ದು, ಗೂಗಲ್‌ಫಾರ್ಮ್: https://forms.gle/GaSmj3ieeggWYRKH6-ನಲ್ಲಿ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಖಗೋಳ ಶಾಸ್ತ್ರ ಕುರಿತ ಪೋಸ್ಟರ್ ಪ್ರಸ್ತುತಿ ಸ್ಪರ್ಧೆಗೆ ಗೂಗಲ್ ಫಾರ್ಮ್:  https://forms.gle/x4zWiqVXofZ9QBD97- ನಲ್ಲಿ ಹೆಸರು ಮತ್ತು ವಿವರಗಳನ್ನು ನೋಂದಾಯಿಸಿಕೊಳ್ಳಲು ಸೆಪ್ಟಂಬರ್ 10 ಕೊನೆ ದಿನವಾಗಿದೆ.

ಜಿಲ್ಲೆಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News