ಒಡಿಶಾ: ಪೊಕ್ಸೊ ಕೋರ್ಟ್ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Update: 2022-09-03 15:59 GMT
photo : india tv 

ಕಟಕ್,ಸೆ.3: ಇಲ್ಲಿಯ ವಿಶೇಷ ಪೊಕ್ಸೊ ನ್ಯಾಯಾಲಯದ ನ್ಯಾಯಾಧೀಶ ಸುಭಾಷ ಕುಮಾರ ಬಿಹಾರಿಯವರ ಮೃತದೇಹವು ಶುಕ್ರವಾರ ಅವರ ಅಧಿಕೃತ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವಾಗಿರುವಂತೆ ಕಂಡು ಬರುತ್ತಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸಿಪಿ ತಪಸ್ ಚಂದ್ರ ಪ್ರಧಾನ್ ತಿಳಿಸಿದರು. ಬಿಹಾರಿ ಎರಡು ದಿನಗಳಿಂದ ರಜೆಯಲ್ಲಿದ್ದು,ಶುಕ್ರವಾರ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಆದರೆ ಶುಕ್ರವಾರವೂ ಅವರು ರಜೆಯನ್ನು ವಿಸ್ತರಿಸಿದ್ದರು.

ಘಟನೆ ನಡೆದ ಸಂದರ್ಭದಲ್ಲಿ ಬಿಹಾರಿಯವರ ಪತ್ನಿ ಮತ್ತು ಪುತ್ರಿ ಮನೆಯಲ್ಲಿರಲಿಲ್ಲ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಿಹಾರಿಯವರನ್ನು ನೇಣಿನಿಂದ ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಅವರಾಗಲೇ ಮೃತ ಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

ನ್ಯಾಯಾಧೀಶರ ಸಾವಿಗೆ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದರು.

ತಾವಿಬ್ಬರೂ ತಮ್ಮ ತಮ್ಮ ಉದ್ಯೋಗಗಳಲ್ಲಿ ವ್ಯಸ್ತರಾಗಿರುತ್ತಿದ್ದರಿಂದ ಪರಸ್ಪರ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಹೇಳಿದ ನ್ಯಾಯಾಧೀಶರ ಸೋದರ ಸುಬೋಧ ಬಿಹಾರಿ,ಕಟಕ್ನಲ್ಲಿಯ ನ್ಯಾಯಾಧೀಶರ ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News