×
Ad

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2022-09-03 22:13 IST

ಉಡುಪಿ, ಸೆ.3: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ೫ ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಮಕ್ಕಳ ದಿನಾಚರಣೆ ದಿನದಂದು ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978, 2574972 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News