×
Ad

ಜಯಂತ್ ಕುಂಪಲ ಆತ್ಮಹತ್ಯೆ

Update: 2022-09-03 23:07 IST

ಉಳ್ಳಾಲ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ದಲ್ಲಿ ನಡೆದಿದೆ.

ಜಯಂತ್ ಎಸ್.ಕುಂಪಲ (49) ಅವರು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ ಅವರು  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News