ಎನ್‌ಪಿಪಿ ನೇತೃತ್ವದ ಮೇಘಾಲಯ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆಯಲು ಬಿಜೆಪಿ ಚಿಂತನೆ

Update: 2022-09-04 05:27 GMT
ಸಾಂದರ್ಭಿಕ ಚಿತ್ರ

ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ (MDA) ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯಲು ಬಿಜೆಪಿ(BJP) ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಆರು ಪಕ್ಷಗಳ ಮೈತ್ರಿ ಸರ್ಕಾರದಲ್ಲಿ ಬಿಜೆಪಿ ಇಬ್ಬರು ಶಾಸಕರನ್ನು ಹೊಂದಿದೆ.

ಎಂಡಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಬಿಜೆಪಿ ಹಿಂಪಡೆಯುವ ಸಾಧ್ಯತೆ ಇದೆ ಎಂದು ಮೇಘಾಲಯ ಉಸ್ತುವಾರಿ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ಎಂ. ಚೂಬಾ ಶನಿವಾರ ಹೇಳಿದ್ದಾರೆ.

ಮೇಘಾಲಯ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳ ವರದಿಗಳನ್ನು ಬಿಜೆಪಿ ಪಕ್ಷ ಪರಿಶೀಲನೆ ನಡೆಸುತ್ತಿದ್ದು, ಎಂಡಿಎ ಸರ್ಕಾರಕ್ಕೆ ಬೆಂಬಲ ಮುಂದುವರಿಸುವ ಬಗ್ಗೆ ವಿವಿಧ ಹಂತಗಳಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಚೂಬಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News