×
Ad

ಪಾಕಿಸ್ತಾನ ಭೀಕರ ಪ್ರವಾಹಕ್ಕೆ 1,300ಕ್ಕೂ ಅಧಿಕ ಮಂದಿ ಬಲಿ, 7 ಲಕ್ಷಕ್ಕೂ ಅಧಿಕ ಜಾನುವಾರು ಸಾವು

Update: 2022-09-04 10:59 IST

ಇಸ್ಲಾಮಾಬಾದ್: ಪಾಕಿಸ್ತಾನದ(Pakistan) ಭೀಕರ ಪ್ರವಾಹವು(flood) ದೇಶದಲ್ಲಿ ಸುಮಾರು 1,300 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದು, ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ವರದಿಯಾಗಿದೆ.

ಜೂನ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 1,290 ಕ್ಕೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 29 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶನಿವಾರ ತಿಳಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಏತನ್ಮಧ್ಯೆ, ಪಾಕಿಸ್ತಾನದ ಸರಕಾರಿ ಏಜೆನ್ಸಿಗಳು ಮತ್ತು ಖಾಸಗಿ ಎನ್‌ಜಿಒಗಳು ತಮ್ಮ ಪರಿಹಾರ ಕಾರ್ಯಾಚರಣೆಗಳನ್ನು ಯನ್ನು ಮುಂದುವರಿಸಿವೆ.

ದೇಶದ ಬಹುಪಾಲು ವಿಶೇಷವಾಗಿ ದಕ್ಷಿಣದಲ್ಲಿ ಬಲೂಚಿಸ್ತಾನ್, ಖೈಬರ್ ಪಖ್ತುನ್ಖ್ವಾ ಹಾಗೂ ಸಿಂಧ್ ಪ್ರಾಂತ್ಯಗಳು ಮುಳುಗಡೆಯಾಗಿವೆ. ಸಿಂಧ್‌ನಲ್ಲಿ ಕನಿಷ್ಠ 180 ಜನರು ಸಾವನ್ನಪ್ಪಿದ್ದಾರೆ, ನಂತರ ಖೈಬರ್ ಪಖ್ತುನ್ಖ್ವಾ (138) ಹಾಗೂ ಬಲೂಚಿಸ್ತಾನ್ (125) ಹೆಚ್ಚಿನ ಸಾವು ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಕನಿಷ್ಠ, 1,468,019 ಮನೆಗಳು ಭಾಗಶಃ ಅಥವಾ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ, 736,459 ಜಾನುವಾರುಗಳು ಪ್ರವಾಹದಿಂದಾಗಿ ಸಾವನ್ನಪ್ಪಿವೆ.

ಇದನ್ನೂ ಓದಿ: ಎನ್‌ಪಿಪಿ ನೇತೃತ್ವದ ಮೇಘಾಲಯ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆಯಲು ಬಿಜೆಪಿ ಚಿಂತನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News