ರಾಮನಗರ: ಇಬ್ಬರು ಮಕ್ಕಳಿಗೆ ವಿಷ ನೀಡಿ ತಾಯಿ ಆತ್ಮಹತ್ಯೆ
Update: 2022-09-04 11:18 IST
ಮಾಗಡಿ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ.
ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್ ಅವರ ಪತ್ನಿ ರೂಪಾ (38), ಮಕ್ಕಳಾದ 6 ವರ್ಷದ ಹರ್ಷಿತ ಮತ್ತು 4 ವರ್ಷದ ಸ್ಫೂರ್ತಿ ಮೃತರು ಎಂದು ತಿಳಿದುಬಂದಿದೆ. ಜಮೀನಿನ ಬಳಿ ರೂಪ ತಮ್ಮ ಮಕ್ಕಳಿಬ್ಬರಿಗೆ ವಿಷ ಕುಡಿಸಿ ನಂತರ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.