×
Ad

ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ಕ್ರೀಡಾಕೂಟ

Update: 2022-09-04 19:58 IST

ಮಂಗಳೂರು, ಸೆ.4: ಪಠ್ಯದ ಜೊತೆ ಕ್ರೀಡಾ ಚಟುವಟಿಕೆಯು ಬದುಕಿನ ಮೇಲೆ ಪ್ರಧಾನ ಪಾತ್ರ ವಹಿಸುತ್ತದೆ. ಹಾಗಾಗಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನವನ್ನು ನೀಡುತ್ತದೆ ಎಂದು ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ವಿಜೇತೆ ವೆನಿಜಿಯ ಎ ಕಾರ್ಲೊ ಹೇಳಿದರು.

ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ವತಿಯಿಂದ ಕಾಲೇಜಿನ ಮೈದಾನದಲ್ಲಿ ರವಿವಾರ ನಡೆದ ವಾರ್ಷಿಕ ಕ್ರೀಡಾಕೂಟ (ಉಮಂಗ್)ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಣಿ ಶ್ರೀವತ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಸ್ನಾತಕೋತ್ತರ ವಾಣಿಜ್ಯ ಮತ್ತು ಎಂಬಿಎ (ಐಬಿ) ವಿಭಾಗದ ಸಂಯೋಜಕ ಡಾ. ಜಗದೀಶ ಬಿ, ತುಳು ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ, ಕೊಂಕಣಿ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ಬಿ ದೇವದಾಸ ಪೈ, ದೈಹಿಕ ಶಿಕ್ಷಕರಾದ ಅಶ್ವಥ್ ಸಾಲಿಯಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News