ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಮುರುಗ ಮಠದ ಸ್ವಾಮೀಜಿಯ ಬಂಧನಕ್ಕೆ ಆಗ್ರಹ
Update: 2022-09-04 20:13 IST
ಮಂಗಳೂರು, ಸೆ.4: ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಗ ಮಠದ ಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಗ ಸ್ವಾಮೀಜಿಯನ್ನು ಬಂಧಿಸುವಂತೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹಸಂಚಾಲಕ ಡಾ. ಕೃಷ್ಣಪ್ಪಕೊಂಚಾಡಿ ಆಗ್ರಹಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಮತ್ತು ಪೊಲೀಸರು ಉದ್ದೇಶ ಪೂರ್ವಕವಾಗಿ ನಿರೀಕ್ಷಣಾ ಜಾಮೀನು ಪಡೆಯಲು ಅನುಕೂಲವಾಗುವಂತೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದು ಖಂಡನೀಯ. ಈ ಪ್ರಕರಣವನ್ನು ರಾಜ್ಯದಿಂದ ಹೊರಗಿನ ಇತರೆ ರಾಜ್ಯಗಳಲ್ಲಿ ತನಿಖೆಗೆ ಒಳಪಡಿಸುವ ಮೂಲಕ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಬೇಕು ಒತ್ತಾಯಿಸಿದ್ದಾರೆ.