ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾರ್ಕಳ, ಸೆ.4: ವೈಯಕ್ತಿಕ ಕಾರಣದಿಂದ ಮನನೊಂದು ವ್ಯಕ್ತಿಯೊಬ್ಬರು ಮನೆಯ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನೀರೆ ಗ್ರಾಮದ ನೀರೆಜೆಡ್ಡು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ನೀರೆಯ ಜೆಡ್ಡು ನಿವಾಸಿ ಆನಂದ ಶೆಟ್ಟಿ(45) ಎಂದು ಗುರುತಿಸ ಲಾಗಿದೆ. ಟೆಂಪೋ ಚಾಲಕರಾಗಿ ದುಡಿಯುತ್ತಿದ್ದ ಆನಂದ ಶೆಟ್ಟಿ, ಪತ್ನಿ ಮಾವನ ಮನೆಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವಿಪರೀತ ಕುಡಿಯುವ ಚಟ ಹೊಂದಿದ್ದ ದೇವಲ್ಕುಂದ ಗ್ರಾಮದ ಬಗ್ವಾಡಿ ಕ್ರಾಸ್ ಬಳಿಯ ನಿವಾಸಿ ರತ್ನಾಕರ ಎಂಬವರು ಮಾನಸಿಕವಾಗಿ ನೊಂದು ಸೆ.3ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.