ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2022-09-04 21:19 IST
ಕಾರ್ಕಳ, ಸೆ.4: ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಬೋಪಾಡಿ ಎಂಬಲ್ಲಿ ಸೆ.3ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸಲ್ಮಾನ್ ಎಂದು ಗುರುತಿಸಲಾಗಿದೆ. ರಂಗನಪಲ್ಕೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರ ಸಲ್ಮಾನ್ ಬೈಕಿ ನೊಂದಿಗೆ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯ ಗೊಂಡ ಸಲ್ಮಾನ್ ಸ್ಥಳದಲ್ಲಿ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.