×
Ad

ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶ್ರೀಗಳಿಗೆ ಸೆ.14ರ ವರೆಗೆ ನ್ಯಾಯಾಂಗ ಬಂಧನ

Update: 2022-09-05 11:43 IST

ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ  ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚಿತ್ರದುರ್ಗದ ಎರಡನೇ ಅಪರ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲ ಅವರು ಈ ಆದೇಶ ನೀಡಿದ್ದಾರೆ. 

ತನಿಖೆಗಾಗಿ ಸ್ವಾಮೀಜಿ ಅವರನ್ನು ಐದು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಅದರಂತೆ ಸೆ.2ರಂದು 3 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.  

ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ ಹಾಜರು ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಪೊಲೀಸರು ಅವರನ್ನು ಹಾಜರು ಪಡಿಸಿದ್ದರು. 

ಇದನ್ನೂ ಓದಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News