ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
Update: 2022-09-05 12:02 IST
ಬೆಳಗಾವಿ: ಬೈಲಹೊಂಗಲ ತಾಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.
ನೇಗಿನಹಾಳ ಗ್ರಾಮದ ಮಠದಲ್ಲೇ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲವು ದಿನಗಳ ಹಿಂದಷ್ಟೇ ಮಹಿಳೆಯರಿಬ್ಬರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರು ಕೂಡ ಉಲ್ಲೇಖವಾಗಿತ್ತು ಎಂದು ಹೇಳಲಾಗಿತ್ತು. ಇದರಿಂದಲೇ ನೊಂದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶ್ರೀಗಳಿಗೆ ಸೆ.14ರ ವರೆಗೆ ನ್ಯಾಯಾಂಗ ಬಂಧನ