PSI ನೇಮಕಾತಿ ಹಗರಣ: ವೈರಲ್ ಆದ ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದ ಬಿಜೆಪಿ ಶಾಸಕ

Update: 2022-09-05 09:41 GMT

ಕೊಪ್ಪಳ: ಪಿಎಸ್ಐ‌ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ್ದು ಎನ್ನಲಾದ ಫೋನ್ ಸಂಭಾಷಣೆಯ ಆಡಿಯೊ ಒಂದು ವೈರಲ್ ಆಗಿದ್ದು, ಅದರಲ್ಲಿ ಇರುವ ಧ್ವನಿ ನನ್ನದೇ ಎಂದು ಕನಕಗಿರಿ ಬಿಜೆಪಿ (BJP) ಶಾಸಕ ಬಸವರಾಜ ದಢೇಸುಗೂರು (BASAVARAJ DURUGAPPA DADESUGUR) ಹೇಳಿದ್ದಾರೆ. 

ಪಿಎಸ್ಐ‌ ನೇಮಕಾತಿ ಮಾಡಿಸಿಕೊಡುವುದಾಗಿ‌ ಹೇಳಿ ವ್ಯಕ್ತಿಯೊಬ್ಬರಿಂದ 15 ಲಕ್ಷ ರೂ. ಪಡೆದ ಬಗ್ಗೆ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಅವರ ಮೇಲೆ ಆರೋಪ ಕೇಳಿಬಂದಿತ್ತು. 

ಪರಸಪ್ಪ ಬೇಗೂರು ಎಂಬುವರು ಶಾಸಕರಿಗೆ ಪೋನ್ ಮಾಡಿ ನನ್ನ ಮಗನ ಪಿಎಸ್ಐ‌ ನೇಮಕಾತಿಗೆ ಕೊಟ್ಟ 15 ಲಕ್ಷ ರೂ.  ಹಣವನ್ನು ವಾಪಸ್ ಕೊಡಿ ಎಂದು ‌ಕೇಳಿದ್ದಾರೆ. ಇದಕ್ಕೆ ಶಾಸಕ ಹೌದು ನೀನು ದುಡ್ಡು ‌ಕೊಟ್ಟಿದ್ದೀಯಾ, ವಾಪಸ್ ಕೊಡ್ತೀನಿ ಅಂತ ಹೇಳಿನಲ್ಲ ಎನ್ನುವ ಮಾತುಗಳು ವೈರಲ್ ಆಗುತ್ತಿರುವ ಆಡಿಯೊದಲ್ಲಿದೆ.

ಇದೀಗ ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ದಢೇಸಗೂರು, 'ಪ್ರಕರಣದ ಕುರಿತು ಮಧ್ಯಸ್ತಿಕೆ ವಹಿಸಲು ನನ್ನೊಂದಿಗೆ ಮಾತನಾಡಿದ್ದರು. ನಾನು ಈ ಕುರಿತು ಬಗೆಹರಿಸುತ್ತೇನೆ ಎಂದು ಹೇಳಿದ್ದೆ. ನಾನು ಹಿರಿಯನಾಗಿ ಮಾತನಾಡಿದ್ದೇನೆ. ಇದರಲ್ಲಿ ನಾನು ದುಡ್ಡು ತೆಗೆದುಕೊಂಡಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಯಾರೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ' ಎಂದು ಹೇಳಿದ್ದಾರೆ. 

ಇದನ್ನೂ ಓದಿ>>> ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News