ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ದೂರುಗಳ ತನಿಖೆಗೆ ಆಯೋಗ ರಚನೆ: ಸಚಿವ ಬಿ.ಸಿ.ನಾಗೇಶ್

Update: 2022-09-05 12:31 GMT

ಬೆಂಗಳೂರು, ಸೆ. 5: ‘ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪ ಸಂಬಂಧ ದೂರುಗಳ ಸ್ವೀಕಾರ ಹಾಗೂ ತನಿಖೆಗೆ ಪ್ರತ್ಯೇಕ ಆಯೋಗ ರಚಿಸಲು ಉದ್ದೇಶಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಆಯೋಗ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಪ್ರಕಟಿಸಿದರು.

‘ಉತ್ತಮ ಸೇವೆಗೈದ ಶಿಕ್ಷಕರಿಗೆ ಪ್ರಶಸ್ತಿ ನೀಡುವ ವ್ಯವಸ್ಥೆ ಪಾರದರ್ಶಕವಾಗಿದೆ. ಯಾವುದೇ ಪ್ರಭಾವಕ್ಕೆ ಒಳಗಾಗಿಲ್ಲ. ಮುಖ್ಯಮಂತ್ರಿ ಕಚೇರಿಯಿಂದಲೂ ಯಾವುದೇ ರೀತಿಯ ಹಸ್ತಕ್ಷೇಪ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದ ನಾಗೇಶ್, ‘ಅನುದಾನರಹಿತ ಖಾಸಗಿ ಶಾಲೆಗಳಲ್ಲಿನ ಉತ್ತಮ ಶಿಕ್ಷಕರನ್ನು ಪ್ರಶಸ್ತಿಗೆ ಪರಿಗಣಿಸಬೇಕೆಂಬ ಬೇಡಿಕೆ ಇದ್ದು, ಈ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು' ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News