ಉಡುಪಿ: ವಿದ್ಯಾಪೋಷಕ್ ವಿದ್ಯಾರ್ಥಿ ಸಮಾವೇಶ
ಉಡುಪಿ, ಸೆ.5: ಪದವಿ ಮತ್ತು ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳ ಅರ್ಧ ದಿನದ ಸಮಾವೇಶ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ರವಿವಾರ ಸಂಪನ್ನಗೊಂಡಿತು.
ಹುಬ್ಬಳ್ಳಿಯ ಮೈಲೈಫ್ ಸಂಸ್ಥೆಯ ಸ್ಥಾಪಕ ಪ್ರವೀಣ ಗುಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅಧ್ಯಕ್ಷ ಎಂ.ಗಂಗಾಧರ ರಾವ್ ಪ್ರಸ್ತಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಮಾವೇಶದ ಉದ್ದೇಶಗಳನ್ನು ವಿವರಿಸಿದರು. ಪ್ರೊ.ನಾರಾಯಣ ಎಂ.ಹೆಗಡೆ ವಿದ್ಯಾರ್ಥಿಗಳಿಗೆ ಅಗತ್ಯದ ಸೂಚನೆ ನೀಡಿದರು.
ರಾಜಗೋಪಾಲ ಆಚಾರ್ಯ, ಎಚ್.ಎನ್.ಶೃಂಗೇಶ್ವರ್, ಭುವನ ಪ್ರಸಾದ ಹೆಗ್ಡೆ, ಸಂತೋಷಕುಮಾರ ಶೆಟ್ಟಿ, ಅಶೋಕ ಎಂ.ಎಚ್., ಎನ್.ವೆಂಕಟೇಶ್, ಗಣೇಶ ಬ್ರಹ್ಮಾವರ, ಮಂಜುನಾಥ ಉಪಸ್ಥಿತರಿದ್ದರು.
300 ಮಂದಿ ವಿದ್ಯಾಪೋಷಕ್ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಈ ಮಕ್ಕಳಿಗೆ ವಿದ್ಯಾರ್ಥಿವೇತನದ ವಿತರಣೆ ಅ.9ರಂದು ಕುಂದಾಪುರದ ಸಹನಾ ಕನ್ವೆನ್ಶನಲ್ ಹಾಲ್‌ನಲ್ಲಿ ನಡೆಯಲಿದೆ.