ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತ್ಯು

Update: 2022-09-05 15:48 GMT
ಸಾಂದರ್ಭಿಕ ಚಿತ್ರ

ಮಲ್ಪೆ, ಸೆ.5: ಮಲ್ಪೆ ಬಂದರಿನಲ್ಲಿ ನಿಲ್ಲಿಸಿದ ಬೋಟಿನಿಂದ ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ರೊಬ್ಬರು ಮೃತಪಟ್ಟ ಘಟನೆ ಸೆ.4ರಂದು ತಡರಾತ್ರಿ ನಡೆದಿದೆ.

ಮೃತರನ್ನು ಮಲ್ಪೆ ತೊಟ್ಟಂ ನಿವಾಸಿ ಪುರಂದರ (42) ಎಂದು ಗುರುತಿಸ ಲಾಗಿದೆ. ಇವರು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತ್ತಿದ್ದು, ಬೋಟಿನಿಂದ ಮೀನು ಖಾಲಿ ಮಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ನೀರಿಗೆ ಹಾರಿ ಪುರಂದರ ಅವರನ್ನು ಮೇಲಕ್ಕೆ ಎತ್ತಿದರು. ತೀವ್ರವಾಗಿ ಅಸ್ವಸ್ಥಗೊಂಡ ಪುರಂದರ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News