PSI ನೇಮಕಾತಿ ಹಗರಣ: ಅಮೃತ್ ಪೌಲ್ ಮತ್ತೆ 8 ದಿನ ಸಿಐಡಿ ವಶಕ್ಕೆ

Update: 2022-09-05 16:36 GMT
ಅಮೃತ್ ಪೌಲ್

ಬೆಂಗಳೂರು, ಸೆ.5: ಪಿಎಸ್ಸೈ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಪೊಲೀಸ್  ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ಪ್ರತ್ಯೇಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.  

ಸಿಐಡಿಯ ಡಿವೈಎಸ್‍ಪಿ ಎಸ್.ಶಿವಕುಮಾರ್ ಅವರ ಕೋರಿಕೆಯನ್ನು ಮಾನ್ಯ ಮಾಡಿರುವ ನಗರದ 1ನೆ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್, ಸೆ.12ರವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. 

ಅಮೃತ್‍ಪೌಲ್ ಅವರು ಲಕ್ಷಾಂತರ ರೂ.ಪಡೆದು ಅಕ್ರಮ ಎಸಗಿರುವ ಸಾಧ್ಯತೆ ಇದೆ. ಪೌಲ್ ಅವರು ಹೊಂದಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಬಂಧಪಟ್ಟ ಬ್ಯಾಂಕ್‍ಗಳಿಂದ ಪಡೆದು, ಹಣದ ವರ್ಗಾವಣೆಯ ಕುರಿತು ತನಿಖೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಪೌಲ್ ಅವರನ್ನು 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕೆಂದು ಸಿಐಡಿ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಪೀಠವು 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News