ದಿಲ್ಲಿಯಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಗೆ ಸಿಐಎಸ್‌ಎಫ್ ಭದ್ರತೆ

Update: 2022-09-06 05:58 GMT
Photo:PTI

ಹೊಸದಿಲ್ಲಿ: ದಿಲ್ಲಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್ RSS) ಕೇಂದ್ರ ಕಛೇರಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಿಂದ  ಭದ್ರತೆಯನ್ನು ಒದಗಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Z-plus ಝಡ್ ಪ್ಲಸ್ ಭದ್ರತೆಯ ನಿಯಮಗಳ ಪ್ರಕಾರ, ದಿಲ್ಲಿಯ ಝಾಂಡೇವಾಲನ್‌ನಲ್ಲಿರುವ ಆರೆಸ್ಸೆಸ್ ಪ್ರಧಾನ ಕಚೇರಿ ಕೇಶವ್ ಕುಂಜ್‌ನ ಭದ್ರತೆಗೆ ವಿಶೇಷವಾಗಿ ತರಬೇತಿ ಪಡೆದ ಸಿಐಎಸ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಸಿಐಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗ್ಪುರದಲ್ಲಿರುವ ಆರೆಸ್ಸೆಸ್ ಪ್ರಧಾನ ಕಚೇರಿ ಹಾಗೂ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್  ಈಗಾಗಲೇ ಸಿಐಎಸ್‌ಎಫ್ ರಕ್ಷಣೆಯಲ್ಲಿದ್ದಾರೆ ಎಂದು ಅವರು ಹೇಳಿದರು.

 "ದಿಲ್ಲಿಯಲ್ಲಿರುವ ಆರೆಸ್ಸೆಸ್ ಕಚೇರಿಗೆ ಸೆಪ್ಟೆಂಬರ್ 1 ರಿಂದ ಭದ್ರತೆ ನೀಡಲಾಗಿದೆ. ಕಟ್ಟಡದ ಆವರಣದಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಸಿಐಎಸ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿವಿಧ ಗುಪ್ತಚರ ವರದಿಗಳನ್ನು ಪಡೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ " ಎಂದು ಅಧಿಕಾರಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News