ಅಬಕಾರಿ ನೀತಿ ಅನುಷ್ಟಾನದಲ್ಲಿ ಅಕ್ರಮ: ದಿಲ್ಲಿ ಸೇರಿದಂತೆ 6 ರಾಜ್ಯಗಳಲ್ಲಿ ಈಡಿ ದಾಳಿ

Update: 2022-09-06 07:26 GMT
Photo:PTI

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಈಡಿ) (Enforcement Directorate)ದಿಲ್ಲಿ ಸೇರಿದಂತೆ 6 ರಾಜ್ಯಗಳಾದ್ಯಂತ ಹರಡಿರುವ ಅನೇಕ ಸ್ಥಳಗಳಲ್ಲಿ ಇಂದು ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ನಡೆದಿದೆ ಎನ್ನಲಾದ ಹಗರಣದಲ್ಲಿ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ  ಕೆಲವು ಅಧಿಕಾರಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ದಿಲ್ಲಿ, ತೆಲಂಗಾಣ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ ಹಾಗೂ ಕರ್ನಾಟಕದಲ್ಲಿ ಸುಮಾರು 30 ಸ್ಥಳಗಳಲ್ಲಿ ಶೋಧಿಸಲಾಗುತ್ತಿದ್ದು, ಪ್ರಕರಣದಲ್ಲಿ ಹೆಸರಿಸಲಾದ ಖಾಸಗಿ ವ್ಯಕ್ತಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇವುಗಳು ಮನೀಶ್ ಸಿಸೋಡಿಯಾ ಅಥವಾ ಇತರ ಯಾವುದೇ ಸರಕಾರಿ ನೌಕರರಿಗೆ ಸಂಬಂಧಿಸಿದ ಕಟ್ಟಡಗಳನ್ನು ಒಳಗೊಂಡಿಲ್ಲ ಎಂದು ಅವರು ಹೇಳಿದರು.

ಸಿಸೋಡಿಯಾ ಮತ್ತು ಇತರ 14 ಮಂದಿಯನ್ನು ಹೆಸರಿಸಿರುವ ಸಿಬಿಐ ಎಫ್‌ಐಆರ್‌ ಪಡೆದ ನಂತರ ಫೆಡರಲ್ ಏಜೆನ್ಸಿಯು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣದ ತನಿಖೆಯನ್ನು ಆರಂಭಿಸಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News