×
Ad

ಸೆ.7ರಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಪ್ರಾರ್ಥನಾ ಸಭೆ

Update: 2022-09-06 17:44 IST

ಉಡುಪಿ, ಸೆ.6: ಕರ್ನಾಟಕದಲ್ಲಿ 21 ದಿನಗಳ ಕಾಲ ಸಂಚರಿಸಲಿರುವ ಭಾರತ ಜೂಡೋ ಯಾತ್ರೆ  ಯಶಸ್ವಿಯಾ ಗಲು ಉಡುಪಿ ಜಿಲ್ಲಾ  ಕಾಂಗ್ರೆಸ್ ವತಿಯಿಂದ ಸೆ.7ರಂದು ಬೆಳಗ್ಗೆ 7ಗಂಟೆಗೆ ಉಡುಪಿ ಭುಜಂಗ ಪಾರ್ಕ್ ಗಾಂಧಿ ಕಟ್ಟೆ ಎದುರು ಸರ್ವ ಧರ್ಮ ಪ್ರಾರ್ಥನಾ ಸಭೆಯನ್ನು ಹಮ್ಮಿಕೊಂಡಿದೆ

ಈ ಪ್ರಾರ್ಥನೆಯಲ್ಲಿ ಎಲ್ಲಾ ಧರ್ಮದ ಧರ್ಮಗುರುಗಳು ಭಾಗವಹಿಸಲಿ ರುವರು. ಪ್ರಚಲಿತ ದೇಶದಲ್ಲಿ ನಡೆಯುತ್ತಿರುವ ಜಾತಿ ಧರ್ಮಗಳ ಧ್ರುವೀಕರಣ ಸಂದರ್ಭದಲ್ಲಿ ಜನರ ಮನಸ್ಸನ್ನು ಬೆಸೆಯುವ ನಿಟ್ಟಿನಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ  ಕನ್ಯಾ ಕುಮಾರಿಯಿಂದ ಕಾಶ್ಮೀರ ದವರೆಗೆ 150 ದಿನಗಳ ಭಾರತ ಐಕ್ಯತಾ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News