ಕೆಪಿಟಿಸಿಎಲ್ ನೇಮಕಾತಿ ಹಗರಣ: ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

Update: 2022-09-06 14:19 GMT

ಬೆಳಗಾವಿ, ಸೆ.6: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಸಹಾಯಕ ಲೈನ್‍ಮ್ಯಾನ್ ಆಗಿರುವ ಹುಕ್ಕೇರಿ ತಾಲೂಕಿನ ಗಿರೀಶ್ ಬನಾಜ್, ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ ತಾಲೂಕಿನ ಅರಭಾವಿ ಗ್ರಾಮದ ಶಿವಾನಂದ ದುಂಡಪ್ಪ ಹಳ್ಳೂರ ಎಂಬ ಮೂವರು ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಆರೋಪಿ ಗಿರೀಶ್ ಉತ್ತರ ತಯಾರಿಸಿ ಅಭ್ಯರ್ಥಿಗಳಿಗೆ ಹೇಳಲು ಸಹಕರಿದ್ದನು. ಆರೋಪಿ ಲಕ್ಷ್ಮಣ್ ಸ್ಮಾರ್ಟ್ ಗಡಿಯಾರ  ಖರೀದಿ ಮಾಡಿ ಅಭ್ಯರ್ಥಿಗಳಿಗೆ ನೀಡಿದ್ದ. ಮತ್ತೋರ್ವ ಆರೋಪಿ ಶಿವಾನಂದ ಇಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂಡು ಪರೀಕ್ಷೆ ಬರೆಯಲು ಹೋಗಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಶಿವಾನಂದ ಬಳಿಯಿಂದ 5 ಮೊಬೈಲ್ ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಮತ್ತೆ ಮೂವರನ್ನು ಬಂಧಿಸುವ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 

ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‍ನಲ್ಲಿ ಸ್ಮಾರ್ಟ್‍ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಇದನ್ನೂ ಓದಿ>>> ಬೇಲೂರು: ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿಯನ್ನು ಹತ್ಯೆಗೈದ ಪತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News