ಸೆ. 7ರಂದು ಕರಾವಳಿಯಲ್ಲಿ ರೆಡ್ ಅಲರ್ಟ್: ಹವಾಮಾನ ಇಲಾಖೆ
Update: 2022-09-06 20:56 IST
ಉಡುಪಿ, ಸೆ.6: ಬುಧವಾರದಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೆ.7ರಂದು ರೆಡ್ ಅಲರ್ಟ್ ಹಾಗು ಮೂರು ದಿನ ಆರೆಂಜ್ ಅಲರ್ಟ್‌ನ್ನು ಘೋಷಿಸಿದೆ.
ಸೆ.7ರಿಂದ 10ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 115.6ಮಿ.ಮೀ.ನಿಂದ 204.4ಮಿ.ಮೀ. ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.