ಕಾರ್ಕಳ: 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Update: 2022-09-06 21:15 IST
ಕಾರ್ಕಳ : ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಪೊಸ್ರಾಲ್ ಎಂಬಲ್ಲಿ ಆ.30ರಿಂದ ಸೆ.5ರ ಮಧ್ಯಾವಧಿಯಲ್ಲಿ ನಡೆದಿದೆ.
ಜೊಯ್ಸನ್ ಮನೋಜ್ ಪಿಂಟೋ ಎಂಬವರ ಮನೆಗೆ ನುಗ್ಗಿದ ಕಳ್ಳರು, ಬೆಡ್ ರೂಮ್‌ನ ಕಪಾಟಿನಲ್ಲಿನ ಲಾಕರ್‌ನಲ್ಲಿದ್ದ ಸುಮಾರು 6 ಲಕ್ಷ ರೂ ಮೌಲ್ಯದ ಒಟ್ಟು 154 ಗ್ರಾಮ್ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆಂದು ದೂರಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.