ಸ್ಮಶಾನಕ್ಕೆ ಜಾಗ ಒದಗಿಸಲಾಗಿದೆ: ಹೈಕೋರ್ಟ್ ಗೆ ಮಾಹಿತಿ ನೀಡಿದ ಸರಕಾರ

Update: 2022-09-06 17:24 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.6: ಸ್ಮಶಾನಕ್ಕೆ ಜಾಗ ಇಲ್ಲದ ಗ್ರಾಮಗಳಿಗೆ ಜಮೀನು ಒದಗಿಸಲಾಗಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ. 

ನಗರದ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸರಕಾರದ ಪರ ವಕೀಲರು, ಸದ್ಯ 27,458 ಗ್ರಾಮಗಳಿಗೆ ಸ್ಮಶಾನಕ್ಕಾಗಿ ಭೂಮಿಯನ್ನು ಒದಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.  

ಹಲವಾರು ಕಡೆ ಸ್ಮಶಾನಕ್ಕೆ ಜಾಗ ಒದಗಿಸಲು ಸರಕಾರಿ ಜಮೀನು ಲಭ್ಯವಿಲ್ಲ. ಹಾಗಾಗಿ ಖಾಸಗಿಯವರ ಜಮೀನು ಖರೀದಿಸಲು ಸರಕಾರ ಯೋಜನೆ ರೂಪಿಸಿದೆ. ಆದರೆ, ಸ್ಮಶಾನಕ್ಕೆ ತಮ್ಮ ಭೂಮಿ ನೀಡಲು ಜನ ಮುಂದೆ ಬರುತ್ತಿಲ್ಲ. ಪ್ರತಿಯೊಂದು ಹಳ್ಳಿಯಲ್ಲೂ ವಿವಿಧ ಧರ್ಮ-ಜಾತಿಯ ಜನರು ತಮ್ಮದೇ ಆದ ವಿಭಿನ್ನ ಆಚರಣೆ ಮತ್ತು ಸಂಪ್ರದಾಯ ಹೊಂದಿದ್ದಾರೆ. ಇದರಿಂದ ಸ್ಮಶಾನಕ್ಕೆ ಜಾಗ ಒದಗಿಸಲು ಕಷ್ಟವಾಗಿದೆ. ಎರಡು ವರ್ಷ ಕಾಲಾವಕಾಶ ನೀಡಿದರೆ 1,428 ಗ್ರಾಮಗಳಿಗೆ ಮತ್ತು ಒಂದು ಪಟ್ಟಣದಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಲಾಗುವುದು ಎಂದು ಸರಕಾರಿ ವಕೀಲರು ಈ ಹಿಂದಿನ ವಿಚಾರಣೆ ವೇಳೆ ಕೋರ್ಟ್‍ಗೆ ಕೋರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News