ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

Update: 2022-09-06 19:11 GMT

ಬೆಂಗಳೂರು:  ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ,  'ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ. 

--------------------------

'ರಾಜ್ಯ ಸಚಿವ ಸಂಪುಟದ ಸದಸ್ಯ, ಆಹಾರ ಮತ್ತು ಅರಣ್ಯ ಖಾತೆ ಸಚಿವ  ಶ್ರೀ ಉಮೇಶ್ ಕತ್ತಿಯವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ಹಾಗು ರಾಜ್ಯದ ಜನತೆಗೆ ತುಂಬಲಾರದ ನಷ್ಟ. ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು  ಭಗವಂತ ಅವರ ಕುಟುಂಬ, ಅಭಿಮಾನಿ ವರ್ಗಕ್ಕೆ ಹಾಗು ಕಾರ್ಯಕರ್ತ ಬಂಧುಗಳಿಗೆ ನೀಡಲಿ'

ಸಿ. ಟಿ. ರವಿ,  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ 

------------------------------------------

'ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಶ್ರೀ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಸದ್ಗತಿ'

- ನಳಿನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷರು, ಬಿಜೆಪಿ ಕರ್ನಾಟಕ 

-----------------------------

'ಕರ್ನಾಟಕ ರಾಜ್ಯ ಸರಕಾರದ ಸಚಿವರಾದ ಆತ್ಮೀಯ ಉಮೇಶ್ ಕತ್ತಿರವರ ನಿಧನದ ಸುದ್ಧಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು.ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಾ ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,ಕುಟುಂಬಸ್ಥರಿಗೆ ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ' 

ಯು.ಟಿ.ಖಾದರ್,  ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News