ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ: ಬೆಳಗಾವಿಯ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ

Update: 2022-09-07 06:32 GMT

ಬೆಳಗಾವಿ, ಸೆ.7: ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ(61) ನಿಧನದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ, ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಶೋಕಾಚರಣೆ:  ಸಚಿವ ಉಮೇಶ್ ಕತ್ತಿ ಅವರ ಗೌರವಾರ್ಥ ರಾಜ್ಯಾದ್ಯಂತ ಇಂದು ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ.

ಇದನ್ನೂ ಓದಿ:  ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಸಿದ್ದರಾಮಯ್ಯ ಸಂತಾಪ

ಇಂದು ಸಂಜೆ ಅವರ ಸ್ವಗ್ರಾಮ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದ್ದು,  ಸಚಿವ ಉಮೇಶ್​ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ  ಏರ್‌ಲಿಫ್ಟ್‌ ಮಾಡಲು ನಿರ್ಧರಿಸಲಾಗಿದೆ. ಬೆಲ್ಲದ ಬಾಗೇವಾಡಿಯಲ್ಲಿ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ಅವರ ಸ್ವಂತ ತೋಟದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News