×
Ad

ಬೆಂಗಳೂರು: ಬಸ್ ನಿಲ್ದಾಣದಲ್ಲಿ ದಾಖಲೆ ಇಲ್ಲದ 76 ಲಕ್ಷ ರೂ. ವಶ

Update: 2022-09-07 19:03 IST
ವಶಕ್ಕೆ ಪಡೆದುಕೊಂಡಿರುವ ಹಣ

ಬೆಂಗಳೂರು, ಸೆ.7: ನಗರದಲ್ಲಿ ದಾಖಲೆಯಿಲ್ಲದ 76 ಲಕ್ಷ ರೂ.ಹಣವನ್ನು ಸಿಸಿಬಿ (CCB) ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಶಾಂತಿನಗರ ಬಸ್ ನಿಲ್ದಾಣದಲ್ಲಿ ನಿನ್ನೆ ರಾತ್ರಿ ನಿಂತಿದ್ದ ಇಬ್ಬರು ವ್ಯಕ್ತಿಗಳ ದಾಖಲೆ ಇಲ್ಲದ ಹಣ ಇರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಗಳ ಬಳಿ ದಾಖಲೆ ಇಲ್ಲದ 76 ಲಕ್ಷ ನಗದು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗಿದೆ. 

ಹಣ ದೊರೆತ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News