ಏಶ್ಯಕಪ್: ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ

Update: 2022-09-07 17:47 GMT

  ಶಾರ್ಜಾ,ಸೆ.7: ಏಶ್ಯಕಪ್ ಸೂಪರ್-4 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ದ ಪಾಕಿಸ್ತಾನ ತಂಡ 1 ವಿಕೆಟ್‌ನಿಂದ ರೋಚಕ ಜಯ ದಾಖಲಿಸಿದೆ. ಈ ಮೂಲಕ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

ಬುಧವಾರ ಗೆಲುವಿಗೆ 130 ರನ್ ಗುರಿ ಪಡೆದ ಪಾಕಿಸ್ತಾನ 19.2 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದೆ. ಕೊನೆಯ ಓವರ್‌ನಲ್ಲಿ ಗೆಲುವಿಗೆ 11 ರನ್ ಅಗತ್ಯವಿತ್ತು. ಫಾರೂಕಿ ಬೌಲಿಂಗ್‌ನಲ್ಲಿ ಸತತ ಎರಡು ಸಿಕ್ಸರ್ ಸಿಡಿಸಿದ ನಸೀಂ ಶಾ ಪಾಕ್‌ಗೆ ರೋಚಕ ಜಯ ತಂದುಕೊಟ್ಟರು.

ಇದಕ್ಕೂ ಮೊದಲು ಟಾಸ್ ಜಯಿಸಿದ ಪಾಕ್ ಎದುರಾಳಿ ಅಫ್ಘಾನ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿತು. ಅಫ್ಘಾನ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News