ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ

Update: 2022-09-07 17:43 GMT

ಬೆಂಗಳೂರು, ಸೆ.7: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗಾಗಿ ಜನವರಿ 2021 ರಿಂದ ಡಿಸೆಂಬರ್ 2022ರಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡ ಭಾಷೆಯ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ.25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು. 

ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜ.04 ರೊಳಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆ, ದೊಡ್ಡ ಬೆಟ್ಟಹಳ್ಳಿ ಬಡಾಬಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು– 560097 ಗೆ ಕಳುಹಿಸಬೇಕು.

ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್   www.kstacdemy.in ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News