×
Ad

ಪುತ್ತೂರು : ಸರ್ಕಾರಿ ಬಸ್ಸಿನಿಂದ ಪ್ರಯಾಣಿಕನನ್ನು ಕಾಲಿನಿಂದ ತುಳಿದು ಹೊರಹಾಕಿದ ಕಂಡಕ್ಟರ್!

Update: 2022-09-07 23:21 IST

ಪುತ್ತೂರು : ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯಪದವು ಕಡೆಗೆ ಸಂಜೆ ಹೋಗುತ್ತಿದ್ದ ಸರಕಾರಿ ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕೋರ್ವನಿಗೆ ನಿರ್ವಾಹಕ ಕೈಯಿಂದ ಹಲ್ಲೆ ಮಾಡಿ ಕಾಲಿನಿಂದ ದೂಡಿ ಹಾಕಿದ ಘಟನೆ ಇಂದು ಸಂಜೆ ಈಶ್ವರಮಂಗಲ ಪೇಟೆಯಲ್ಲಿ ನಡೆದಿದೆ.

ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬವರು ಪದಡ್ಕಕ್ಕೆ ಹೋಗಲು ಬಸ್ಸನ್ನು ಹತ್ತಿದ್ದು, ಮದ್ಯಪಾನ ಮಾಡಿದ್ದಾನೆ ಎಂದು ಬಸ್ ನಿರ್ವಾಹಕ ಕೃಷ್ಣಪ್ಪರನ್ನು ಕೈಯಿಂದ ದೂಡಿ, ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ. ಬಿದ್ದಿರುವ ಕೃಷ್ಣಪ್ಪರನ್ನು ನಿರ್ವಾಹಕ ಹಾಗೆ ಬಿಟ್ಟು ತೆರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಿಷಯ ತಿಳಿದ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ ಸರಕಾರಿ ಬಸ್ ನ ಪುತ್ತೂರು ಘಟಕವನ್ನು ಸಂಪರ್ಕಿಸಿ ಬಸ್ಸು ನಿರ್ವಾಹಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಆತನಲ್ಲಿ ಕ್ಷಮೆ ಕೇಳಿಸುವಂತೆ ಆಗ್ರಹಿಸಿದ್ದಾರೆ. ಈ ಕೃತ್ಯದ ವೀಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದ್ದು ಕೃತ್ಯಕ್ಕೆ ಕಾರಣರಾದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News