ಮಡಿಕೇರಿ | ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ
Update: 2022-09-08 11:10 IST
ಮಡಿಕೇರಿ: ಎರಡು ಶಾಲೆಗಳ ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಸಮೀಪ ಇಂದು ಅಂಕುರ್ ಶಾಲೆ ಹಾಗೂ ಶ್ರೀರಾಮ್ ಟ್ರಸ್ಟ್ ಶಾಲೆಗೆ ಸೇರಿದ 2 ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಅಂಕುರ್ ಶಾಲೆಯ ಬಸ್ಸಿನ ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ಮಕ್ಕಳು ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಮಕ್ಕಳನ್ನು ನಾಪೋಕ್ಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ನಾಪೋಕ್ಲು ಠಾಣಾ ಧಿಕಾರಿ ಸದಾಶಿವ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಪುತ್ತೂರು | ಪ್ರಯಾಣಿಕನನ್ನು ಕಾಲಿನಿಂದ ತುಳಿದು ಬಸ್ಸಿನಿಂದ ಹೊರಹಾಕಿದ ಪ್ರಕರಣ: KSRTC ನಿರ್ವಾಹಕ ಅಮಾನತು