ರಾತ್ರಿ ಪ್ರಯಾಣಕ್ಕೆ ಪೊಲೀಸರಿಗೆ ನಿರ್ಬಂಧ

Update: 2022-09-08 11:43 GMT

ಬೆಂಗಳೂರು, ಸೆ.8: ತನಿಖೆ ಸಂಬಂಧ ರಾತ್ರಿ ಸಂದರ್ಭದಲ್ಲಿ ಪೊಲೀಸರ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. 

ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖಾ ಸಂಬಂಧ ಹಾಗೂ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ಆದೇಶಿಸಲಾಗಿದೆ. 

ಸಿಐಡಿ ಕಚೇರಿಯಲ್ಲಿ ಇರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾತ್ರ ಅನ್ವಯಿಸುವಂತೆ ಸಿಐಡಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಇತ್ತೀಚಿಗೆ ಗಾಂಜಾ ಪ್ರಕರಣ ಸಂಬಂಧ ಆರೋಪಿಗಳ ಬಂಧನಕ್ಕೆ ಬೆನ್ನತ್ತಿ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಕಾರು ಅಪಘಾತ ಸಂಭವಿಸಿ ಸಬ್ ಇನ್‍ಸ್ಪೆಕ್ಟರ್, ಕಾನ್‍ಸ್ಟೇಬಲ್ ಸೇರಿ ಮೂವರು ದಾರುಣ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಈ ಕ್ರಮ ಕೈಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News