ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಅರ್ಜಿ: ಮುನಿರಾಜು ಗೌಡಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್
Update: 2022-09-08 18:34 IST
ಬೆಂಗಳೂರು, ಸೆ.8: 2014ರ ಲೋಕಸಭಾ ಚುನಾವಣಾ ಖರ್ಚು ವೆಚ್ಚದ ಕುರಿತು ಸೂಕ್ತ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತುಳಸಿ ಮುನಿರಾಜುಗೌಡ ಅವರನ್ನು 3 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹೇರಿದ್ದ ನಿರ್ಬಂಧವನ್ನು 9 ತಿಂಗಳಿಗೆ ಇಳಿಕೆ ಮಾಡಿ ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ತಕರಾರು ಅರ್ಜಿಯನ್ನು ಹೊಸದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ.
ಕೇಂದ್ರ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಕೆ.ಎ.ಮೋಹನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ನರುಲಾ ಅವರಿದ್ದ ನ್ಯಾಯಪೀಠ, ಈ ಆದೇಶ ಮಾಡಿದೆ.
ಅರ್ಜಿದಾರರು ಮೃತಪಟ್ಟಿದ್ದು, ಅವರ ವಾರಸುದಾರರಿಗೆ ಮುಂದುವರಿಯುವ ಅವಕಾಶ ಕಲ್ಪಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಈ ಅರ್ಜಿ ವಜಾಗೊಳಿಸಿ ಆದೇಶಿಸಿದೆ.