ತುಮಕೂರು | ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಆರೋಪ: ಶಿಕ್ಷಕಿಯರಿಬ್ಬರು ಅಮಾನತು

Update: 2022-09-08 15:03 GMT

ತುಮಕೂರು:  ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದಲ್ಲಿ ತಾಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಜತೆಗೆ ಇದೇ ಶಾಲೆಯ ನಾಗರತ್ನಮ್ಮ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಪೋಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ್ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರ ಟೇಬಲ್ ಒಳಗಡೆ ಮದ್ಯದ ಬಾಟಲಿ ಪತ್ತೆಯಾಗಿದೆ. 

ಘಟನೆಯನ್ನು ಸೂಕ್ಷ್ಮವಾಗಿ ಅರಿತ ಶಿಕ್ಷಣ ಇಲಾಖೆ ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News