×
Ad

ಮಂಗಳೂರು; ಅಪ್ರಾಪ್ತ ವಯಸ್ಸಿನ ಮಗಳ ಅತ್ಯಾಚಾರವೆಸಗಿದ ಪ್ರಕರಣ; ಆರೋಪಿ ತಂದೆಗೆ 15 ವರ್ಷ ಕಠಿಣ ಶಿಕ್ಷೆ

Update: 2022-09-08 21:04 IST

ಮಂಗಳೂರು, ಸೆ.8: ಅಪ್ರಾಪ್ತ ವಯಸ್ಸಿನ ತನ್ನ ಮಗಳನ್ನೇ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಗೆ  ಮಂಗಳೂರಿನ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತಗತಿ -೨) ನ್ಯಾಯಾಲಯವು 15 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.

2018ರ ಜನವರಿಯಲ್ಲಿ ಲಾಡ್ಜ್ ಮತ್ತು ಮನೆಯೊಂದರಲ್ಲಿ ತಂದೆಯಿಂದಲೇ ಅಪ್ರಾಪ್ತೆ ಮಗಳನ್ನು ಅತ್ಯಾಚಾರವೆಸಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಪೊಲೀಸ್ ವೃತ್ತ ನಿರೀಕ್ಷಕ ಶರಣಗೌಡ ಹಾಗೂ ಟಿ.ಡಿ. ನಾಗರಾಜ್ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಪರಾಧಿಗೆ 15 ವರ್ಷಗಳ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಅವರು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News