ಸೆ.12ಕ್ಕೆ ದ್ವಿತಿಯ PUC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Update: 2022-09-08 15:50 GMT

ಬೆಂಗಳೂರು, ಸೆ. 8: ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಸೆ.12ರ ಬೆಳಗ್ಗೆ 11ಗಂಟೆ ನಂತರ ಇಲಾಖೆಯ http://karresults.nic.in ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ' ಎಂದು ಮಾಹಿತಿ ನೀಡಿದ್ದಾರೆ.

ಈ ಬಾರಿ ಪಿಯುಸಿ ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ ಆ.25ರ ವರೆಗೆ ನಡೆಸಲಾಗಿತ್ತು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News