ಅಪರಾಧಿಗಳ ಬಿಡುಗಡೆ ಆದೇಶ ಸೇರಿದಂತೆ ಸಂಪೂರ್ಣ ದಾಖಲೆ ಸಲ್ಲಿಕೆಗೆ ಗುಜರಾತ್ ಸರಕಾರಕ್ಕೆ ಸುಪ್ರೀಂ ಆದೇಶ

Update: 2022-09-09 10:38 GMT
Photo:PTI

ಹೊಸದಿಲ್ಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಆದೇಶ ಸೇರಿದಂತೆ ಪ್ರಕ್ರಿಯೆಗಳ ಸಂಪೂರ್ಣ ದಾಖಲೆಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಗುಜರಾತ್ ಸರಕಾರಕ್ಕೆ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹಾಜರುಪಡಿಸಲು ಗುಜರಾತ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ.

ಬಿಲ್ಕಿಸ್ ಬಾನು ಕುಟುಂಬದ ಏಳು ಸದಸ್ಯರ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಯ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಕಳೆದ ತಿಂಗಳು ಬಿಡುಗಡೆ ಮಾಡಲಾಗಿತ್ತು.

ಈ ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ಅವರಲ್ಲಿ ಒಬ್ಬ ತನ್ನ ಅವಧಿಪೂರ್ವ ಬಿಡುಗಡೆಗಾಗಿ ಮನವಿಯೊಂದಿಗೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದ.

ಪ್ರಕರಣದ ಮುಂದಿನ ವಿಚಾರಣೆ ಮೂರು ವಾರಗಳ ಬಳಿಕ ನಡೆಯಲಿದೆ.

ಅಪರಾಧಿಗಳ  ಬಿಡುಗಡೆಗೆ ವ್ಯಾಪಕ ಆಕ್ರೋಶ ಮತ್ತು ಖಂಡನೆ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರು ಹಾಗೂ ಇತಿಹಾಸಕಾರರು ಸೇರಿದಂತೆ 6000ಕ್ಕೂ ಅಧಿಕ ಜನರು ಅಪರಾಧಿಗಳನ್ನು ಬೇಗನೆ ಬಿಡುಗಡೆ ಮಾಡಿರುವ ಆದೇಶವನ್ನು ರದ್ದುಪಡಿಸುವಂತೆ ಸುಪ್ರೀಂಕೋರ್ಟ್ ಗೆ ವಿನಂತಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News