ಬೆಂಗಳೂರು: ನಿವೃತ್ತ ಶಿಕ್ಷಕಿಯ ಕೊಲೆ
Update: 2022-09-09 17:18 IST
ಬೆಂಗಳೂರು, ಸೆ.9: ನಿವೃತ್ತ ಶಿಕ್ಷಕಿಯನ್ನು ಉಸಿರುಗಟ್ಟಿಸಿ ಕೊಲೆಗೈದ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಂಬಾಭವಾನಿ ದೇವಸ್ಥಾನದ ಬಳಿಯ ಪ್ರಸನ್ನ ಕುಮಾರಿ(60) ಕೊಲೆಯಾದ ನಿವೃತ್ತ ಶಿಕ್ಷಕಿ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಇತ್ತೀಚಿಗೆ ನಿವೃತ್ತಿಯಾಗಿದ್ದರು. ನಿವೃತ್ತಿ ನಂತರ ಒಂಟಿಯಾಗಿ ಜೀವನವನ್ನ ಸಾಗಿಸುತ್ತಿದ್ದ ಪ್ರಸನ್ನ ಕುಮಾರಿಯ ಮನೆಗೆ ನಿನ್ನೆ ರಾತ್ರಿ ಬಂದಿದ್ದ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ ಕೊಲೆ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.