ಪ್ರವಾದಿ ಕುರಿತು ಹೇಳಿಕೆಗಾಗಿ ನೂಪುರ್ ಶರ್ಮಾ ಬಂಧನ ಕೋರಿದ್ದ ಅರ್ಜಿಗೆ ಸುಪ್ರೀಂ ತಿರಸ್ಕಾರ

Update: 2022-09-09 13:10 GMT
ನೂಪುರ್ ಶರ್ಮಾ (Photo: PTI)

ಹೊಸದಿಲ್ಲಿ,ಸೆ.9: ಪ್ರವಾದಿ ಮುಹಮ್ಮದ್‌ ಅವರ ಕುರಿತು ನಿಂದನಾತ್ಮಕ ಹೇಳಿಕೆಗಳಿಗಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು(Nupur Sharma) ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಸರ್ವೋಚ್ಚ ನ್ಯಾಯಾಲಯವು(Supreme Court) ಶುಕ್ರವಾರ ನಿರಾಕರಿಸಿದೆ.

"ನಿರ್ದೇಶನಗಳನ್ನು ನೀಡುವಾಗ ನ್ಯಾಯಾಲಯವು ಎಚ್ಚರಿಕೆಯಿಂದಿರಬೇಕು. ಈ ಅರ್ಜಿಯನ್ನು ಹಿಂದೆಗೆದುಕೊಳ್ಳುವಂತೆ ನಾವು ಸಲಹೆ ನೀಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಹೇಳಿದರು. ಬಳಿಕ ತನ್ನ ಹೇಳಿಕೆಗಳಿಂದ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ಶರ್ಮಾರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿದಾರರು ತನ್ನ ಅರ್ಜಿಯನ್ನು ಹಿಂದೆಗೆದುಕೊಂಡರು.

ಕಳೆದ ಜುಲೈನಲ್ಲಿ ಸರ್ವೋಚ್ಚ ನ್ಯಾಯಾಲಯವು, ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಹಲವಾರು ಎಫ್‌ಐಆರ್‌ಗಳು, ಭವಿಷ್ಯದಲ್ಲಿಯ ಎಫ್‌ಐಆರ್‌ಗಳು ಅಥವಾ ದೂರುಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ಆದೇಶಿಸಿತ್ತು.

ಇದನ್ನೂ ಓದಿ: ಸಂತ್ರಸ್ತೆಗೆ ನ್ಯಾಯ ದೊರಕಿಸುವುದು ಅಪರಾಧವೇ ಎಂದು ಉತ್ತರ ಪ್ರದೇಶ ಸರಕಾರಕ್ಕೆ ನ್ಯಾಯಾಲಯ ಪ್ರಶ್ನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News